ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
Cross references
ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.