Home Bibles ಪರಮಗೀತ 5:8 · ಕನ್ನಡ ಬೈಬಲ್
ಪರಮಗೀತ 5:8 · ಕನ್ನಡ ಬೈಬಲ್

ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.

Cross references

ಕೀರ್ತನೆಗಳು 42:1

ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.

ಕೀರ್ತನೆಗಳು 63:1

ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.

ಕೀರ್ತನೆಗಳು 77:1

ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.

ಕೀರ್ತನೆಗಳು 119:81

ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.

ಪರಮಗೀತ 2:5

ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.

ಪರಮಗೀತ 2:7

ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.

ಪರಮಗೀತ 3:5

ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.

ಪರಮಗೀತ 8:4

ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.

ರೋಮಾಪುರದವರಿಗೆ 15:30

ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

ಗಲಾತ್ಯದವರಿಗೆ 6:1

ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಯಾಕೋಬ 5:16

ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

Interlinear

Choose Theme