Home Bibles ಪರಮಗೀತ 7:10 · ಕನ್ನಡ ಬೈಬಲ್
ಪರಮಗೀತ 7:10 · ಕನ್ನಡ ಬೈಬಲ್

ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.

Cross references

ಯೋಬ 14:15

ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.

ಕೀರ್ತನೆಗಳು 45:11

ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.

ಕೀರ್ತನೆಗಳು 147:11

ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.

ಪರಮಗೀತ 2:16

ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.

ಪರಮಗೀತ 6:3

ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.

ಪರಮಗೀತ 7:5

ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.

ಯೋಹಾನ 17:24

ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.

ಅಪೋಸ್ತಲರ ಕೃತ್ಯಗಳು 27:23

ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--

1 ಕೊರಿಂಥದವರಿಗೆ 6:19

ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

ಗಲಾತ್ಯದವರಿಗೆ 2:20

ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.

Interlinear

Choose Theme