Cross references
ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.
ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.
ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.
ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.