Home Bibles ☰ Books ತೀತ 3:15 · ಕನ್ನಡ ಬೈಬಲ್
ತೀತ 3:15 · ಕನ್ನಡ ಬೈಬಲ್

ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

Cross references

ರೋಮಾಪುರದವರಿಗೆ 16:1

ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.

1 ಕೊರಿಂಥದವರಿಗೆ 16:23

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್‌.

ಗಲಾತ್ಯದವರಿಗೆ 5:6

ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಎಫೆಸದವರಿಗೆ 6:23

ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್‌.

ಕೊಲೊಸ್ಸೆಯವರಿಗೆ 4:18

ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

1 ತಿಮೋಥೆಯ 1:2

ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

1 ತಿಮೋಥೆಯ 1:5

ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.

2 ತಿಮೋಥೆಯ 4:22

ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

ಫಿಲೇಮೋನ 1:5

ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.

ಹೆಬ್ರಿಯರಿಗೆ 13:25

ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

2 ಯೋಹಾನ 1:1

ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

3 ಯೋಹಾನ 1:1

ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--

Interlinear

Choose Theme