Home Bibles ಜೆಕರ್ಯ 11:12 · ಕನ್ನಡ ಬೈಬಲ್
ಜೆಕರ್ಯ 11:12 · ಕನ್ನಡ ಬೈಬಲ್

ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.

Cross references

ಆದಿಕಾಂಡ 37:28

ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.

ನಿರ್ಗಮಕಾಂಡ 21:32

ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

ಲೇವ್ಯಕಾಂಡ 27:4

ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.

1 ಅರಸುಗಳು 21:2

ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.

2 ದಿನವೃತ್ತಾಂತ 30:4

ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.

ಮತ್ತಾಯ 26:15

ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ಮಾರ್ಕ 14:10

ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.

ಲೂಕ 22:3

ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.

ಯೋಹಾನ 13:2

ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.

ಯೋಹಾನ 13:27

ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.

Interlinear

Choose Theme