ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
Cross references
ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.