Home Bibles ☰ Books ಜೆಕರ್ಯ 11:7 · ಕನ್ನಡ ಬೈಬಲ್
ಜೆಕರ್ಯ 11:7 · ಕನ್ನಡ ಬೈಬಲ್

ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.

Cross references

ಲೇವ್ಯಕಾಂಡ 27:32

ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.

1 ಸಮುವೇಲ 17:40

ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.

1 ಸಮುವೇಲ 17:43

ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.

ಕೀರ್ತನೆಗಳು 23:4

ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.

ಕೀರ್ತನೆಗಳು 133:1

ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!

ಯೆಶಾಯ 11:4

ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

ಯೆಶಾಯ 40:11

ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆರೆಮಿಯ 5:4

ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.

ಯೆಹೆಜ್ಕೇಲ 37:16

ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.

ಮೀಕ 7:14

ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ಸೆಫನ್ಯ 3:12

ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.

ಜೆಕರ್ಯ 11:4

ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.

ಜೆಕರ್ಯ 11:10

ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,

ಜೆಕರ್ಯ 11:14

ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.

Interlinear

Choose Theme