Home Bibles ☰ Books ಜೆಕರ್ಯ 12:7 · ಕನ್ನಡ ಬೈಬಲ್
ಜೆಕರ್ಯ 12:7 · ಕನ್ನಡ ಬೈಬಲ್

ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.

Cross references

ಯೋಬ 19:5

ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,

ಕೀರ್ತನೆಗಳು 35:26

ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.

ಕೀರ್ತನೆಗಳು 38:16

ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.

ಕೀರ್ತನೆಗಳು 55:12

ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.

ಯೆಶಾಯ 2:11

ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.

ಯೆಶಾಯ 23:9

ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.

ಯೆರೆಮಿಯ 9:23

ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

ಯೆರೆಮಿಯ 30:18

ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.

ಆಮೋಸ 9:11

ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಜೆಕರ್ಯ 4:6

ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಜೆಕರ್ಯ 11:11

ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.

ಮತ್ತಾಯ 11:25

ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

Interlinear

Choose Theme