ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
Cross references
ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.