Home Bibles ಜೆಕರ್ಯ 14:1 · ಕನ್ನಡ ಬೈಬಲ್
ಜೆಕರ್ಯ 14:1 · ಕನ್ನಡ ಬೈಬಲ್

ಇಗೋ, ಕರ್ತನ ದಿನವು ಬರುತ್ತದೆ.

Cross references

ಯೆಶಾಯ 2:12

ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.

ಯೆಶಾಯ 13:6

ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.

ಯೆಶಾಯ 13:9

ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.

ಯೋವೇಲ 2:31

ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

ಯೋವೇಲ 3:14

ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.

ಸೆಫನ್ಯ 1:7

ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿ 4:5

ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.

ಅಪೋಸ್ತಲರ ಕೃತ್ಯಗಳು 2:20

ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.

ಪ್ರಕಟನೆ 16:14

ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.

Interlinear

Choose Theme