Home Bibles ಜೆಕರ್ಯ 2:5 · ಕನ್ನಡ ಬೈಬಲ್
ಜೆಕರ್ಯ 2:5 · ಕನ್ನಡ ಬೈಬಲ್

ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

Cross references

ಕೀರ್ತನೆಗಳು 3:3

ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.

ಕೀರ್ತನೆಗಳು 46:7

ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

ಕೀರ್ತನೆಗಳು 48:3

ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.

ಕೀರ್ತನೆಗಳು 48:12

ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.

ಯೆಶಾಯ 4:5

ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.

ಯೆಶಾಯ 12:6

ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.

ಯೆಶಾಯ 26:1

ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.

ಯೆಶಾಯ 33:21

ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.

ಯೆಶಾಯ 60:18

ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.

ಯೆರೆಮಿಯ 31:39

ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.

ಯೆಹೆಜ್ಕೇಲ 47:3

ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4

ಹಗ್ಗಾಯ 2:7

ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಜೆಕರ್ಯ 1:16

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.

ಜೆಕರ್ಯ 9:8

ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.

ಲೂಕ 2:32

ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.

ಪ್ರಕಟನೆ 21:10

ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.

ಪ್ರಕಟನೆ 21:23

ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

ಪ್ರಕಟನೆ 22:3

ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.

Interlinear

Choose Theme