ಜೆಕರ್ಯ 5:5 · ಕನ್ನಡ ಬೈಬಲ್
ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು.
Cross references
ಜೆಕರ್ಯ 1:9
ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
ಜೆಕರ್ಯ 1:14
ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
ಜೆಕರ್ಯ 1:19
ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
ಜೆಕರ್ಯ 2:3
ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
ಜೆಕರ್ಯ 4:5
ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.