Home Bibles ಜೆಕರ್ಯ 5:9 · ಕನ್ನಡ ಬೈಬಲ್
ಜೆಕರ್ಯ 5:9 · ಕನ್ನಡ ಬೈಬಲ್

ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.

Cross references

ಲೇವ್ಯಕಾಂಡ 11:19

ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.

ದ್ವಿತೀಯೋಪದೇಶಕಾಂಡ 28:49

ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ

ದಾನಿಯೇಲ 9:26

ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ಹೊಶೇಯ 8:1

ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.

ಮತ್ತಾಯ 24:28

ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.

Interlinear

Choose Theme