Home Bibles ☰ Books ಜೆಕರ್ಯ 8:16 · ಕನ್ನಡ ಬೈಬಲ್
ಜೆಕರ್ಯ 8:16 · ಕನ್ನಡ ಬೈಬಲ್

ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.

Cross references

ಲೇವ್ಯಕಾಂಡ 19:11

ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.

ದ್ವಿತೀಯೋಪದೇಶಕಾಂಡ 10:12

ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ

ದ್ವಿತೀಯೋಪದೇಶಕಾಂಡ 11:7

ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.

ಕೀರ್ತನೆಗಳು 15:2

ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.

ಕೀರ್ತನೆಗಳು 34:15

ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.

ಸಾಮೇತಿಗಳು 12:17

ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.

ಸಾಮೇತಿಗಳು 12:19

ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 11:3

ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;

ಯೆರೆಮಿಯ 9:3

ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ

ಯೆಹೆಜ್ಕೇಲ 18:8

ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,

ಹೊಶೇಯ 4:1

ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

ಆಮೋಸ 5:15

ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.

ಆಮೋಸ 5:24

ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.

Interlinear

Choose Theme