Home Bibles ಜೆಕರ್ಯ 8:9 · ಕನ್ನಡ ಬೈಬಲ್
ಜೆಕರ್ಯ 8:9 · ಕನ್ನಡ ಬೈಬಲ್

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.

Cross references

ಯೆಹೋಶುವ 1:6

ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.

ಯೆಹೋಶುವ 1:8

ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.

1 ದಿನವೃತ್ತಾಂತ 22:13

ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.

1 ದಿನವೃತ್ತಾಂತ 28:20

ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.

2 ದಿನವೃತ್ತಾಂತ 15:7

ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.

ಎಜ್ರಾ 5:1

ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್‌ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.

ಎಜ್ರಾ 5:2

ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.

ಯೆಶಾಯ 35:3

ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.

ಯೆಶಾಯ 35:4

ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.

ಹಗ್ಗಾಯ 1:1

ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.

ಹಗ್ಗಾಯ 1:12

ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.

ಹಗ್ಗಾಯ 2:4

ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.

ಹಗ್ಗಾಯ 2:21

ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.

ಜೆಕರ್ಯ 8:13

ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.

ಜೆಕರ್ಯ 8:18

ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಎಫೆಸದವರಿಗೆ 6:10

ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.

2 ತಿಮೋಥೆಯ 2:1

ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.

Interlinear

Choose Theme