ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
Cross references
ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.