ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.
Cross references
ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.