Home Bibles ಸೆಫನ್ಯ 2:10 · ಕನ್ನಡ ಬೈಬಲ್
ಸೆಫನ್ಯ 2:10 · ಕನ್ನಡ ಬೈಬಲ್

ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ

Cross references

ನಿರ್ಗಮಕಾಂಡ 9:17

ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?

ನಿರ್ಗಮಕಾಂಡ 10:3

ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.

1 ದಿನವೃತ್ತಾಂತ 16:21

ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.

ಯೆಶಾಯ 10:12

ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.

ಯೆಶಾಯ 16:6

ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.

ಯೆಶಾಯ 37:22

ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.

ಯೆರೆಮಿಯ 12:14

ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 48:14

ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.

ಯೆರೆಮಿಯ 48:29

ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.

ಯೆಹೆಜ್ಕೇಲ 38:14

ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ

ದಾನಿಯೇಲ 4:37

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

ದಾನಿಯೇಲ 5:20

ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;

ಒಬದ್ಯ 1:3

ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.

ಒಬದ್ಯ 1:11

ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.

ಸೆಫನ್ಯ 2:8

ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.

1 ಪೇತ್ರ 5:5

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

Interlinear

Choose Theme