ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
Cross references
ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.