Home
Bibles
Bible Study with Steffi
Parallel ಆದಿಕಾಂಡ 21
Aa
Parallel ಆದಿಕಾಂಡ
Chapter 21
ಕನ್ನಡ ಬೈಬಲ್ · World English Bible
Change versions
Left Bible
Bible in Basic English
King James Version
New King James Version
World English Bible
Young's Literal Translation
বাংলা বাইবেল
ગુજરાતી બાઇબલ
हिन्दी बाइबिल
ಕನ್ನಡ ಬೈಬಲ್
മലയാളം ബൈബിൾ
मराठी बायबल
नेपाली बाइबल
ଓଡ଼ିଆ ବାଇବେଲ
தமிழ் பரிசுத்த வேதாகமம்
తెలుగు బైబిల్
Right Bible
Bible in Basic English
King James Version
New King James Version
World English Bible
Young's Literal Translation
বাংলা বাইবেল
ગુજરાતી બાઇબલ
हिन्दी बाइबिल
ಕನ್ನಡ ಬೈಬಲ್
മലയാളം ബൈബിൾ
मराठी बायबल
नेपाली बाइबल
ଓଡ଼ିଆ ବାଇବେଲ
தமிழ் பரிசுத்த வேதாகமம்
తెలుగు బైబిల్
Back to ಕನ್ನಡ ಬೈಬಲ್ chapter
Back to World English Bible chapter
ಕನ್ನಡ ಬೈಬಲ್
World English Bible
1
ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
1
Yahweh visited Sarah as he had said, and Yahweh did to Sarah as he had spoken.
2
ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
2
Sarah conceived, and bore Abraham a son in his old age, at the set time of which God had spoken to him.
3
ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
3
Abraham called his son who was born to him, whom Sarah bare to him, Isaac.
4
ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
4
Abraham circumcised his son, Isaac, when he was eight days old, as God had commanded him.
5
ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
5
Abraham was one hundred years old when his son, Isaac, was born to him.
6
ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
6
Sarah said, "God has made me laugh. Everyone who hears will laugh with me."
7
ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
7
She said, "Who would have said to Abraham, that Sarah would nurse children? For I have borne him a son in his old age."
8
ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
8
The child grew, and was weaned. Abraham made a great feast on the day that Isaac was weaned.
9
ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
9
Sarah saw the son of Hagar the Egyptian, whom she had borne to Abraham, mocking.
10
ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
10
Therefore she said to Abraham, "Cast out this handmaid and her son! For the son of this handmaid will not be heir with my son, even with Isaac."
11
ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
11
The thing was very grievous in Abraham's sight on account of his son.
12
ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
12
God said to Abraham, "Don't let it be grievous in your sight because of the boy, and because of your handmaid. In all that Sarah says to you, listen to her voice. For from Isaac will your seed be called.
13
ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
13
Also of the son of the handmaid will I make a nation, because he is your seed."
14
ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
14
Abraham rose up early in the morning, and took bread and a bottle of water, and gave it to Hagar, putting it on her shoulder, and gave her the child, and sent her away. She departed, and wandered in the wilderness of Beersheba.
15
ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
15
The water in the bottle was spent, and she cast the child under one of the shrubs.
16
ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
16
She went and sat down opposite him, a good way off, about a bow shot away. For she said, "Don't let me see the death of the child." She sat over against him, and lifted up her voice, and wept.
17
ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
17
God heard the voice of the boy. The angel of God called to Hagar out of the sky, and said to her, "What ails you, Hagar? Don't be afraid. For God has heard the voice of the boy where he is.
18
ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
18
Get up, lift up the boy, and hold him in your hand. For I will make him a great nation."
19
ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
19
God opened her eyes, and she saw a well of water. She went, filled the bottle with water, and gave the boy drink.
20
ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
20
God was with the boy, and he grew. He lived in the wilderness, and became, as he grew up, an archer.
21
ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
21
He lived in the wilderness of Paran. His mother took a wife for him out of the land of Egypt.
22
ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
22
It happened at that time, that Abimelech and Phicol the captain of his host spoke to Abraham, saying, "God is with you in all that you do.
23
ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
23
Now therefore swear to me here by God that you will not deal falsely with me, nor with my son, nor with my son's son. But according to the kindness that I have done to you, you shall do to me, and to the land in which you have lived as a foreigner."
24
ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
24
Abraham said, "I will swear."
25
ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
25
Abraham complained to Abimelech because of a water well, which Abimelech's servants had violently taken away.
26
ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
26
Abimelech said, "I don't know who has done this thing. Neither did you tell me, neither did I hear of it, until today."
27
ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
27
Abraham took sheep and oxen, and gave them to Abimelech. Those two made a covenant.
28
ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
28
Abraham set seven ewe lambs of the flock by themselves.
29
ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
29
Abimelech said to Abraham, "What do these seven ewe lambs which you have set by themselves mean?"
30
ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
30
He said, "You shall take these seven ewe lambs from my hand, that it may be a witness to me, that I have dug this well."
31
ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
31
Therefore he called that place Beersheba, because they both swore there.
32
ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
32
So they made a covenant at Beersheba. Abimelech rose up with Phicol, the captain of his host, and they returned into the land of the Philistines.
33
ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
33
Abraham planted a tamarisk tree in Beersheba, and called there on the name of Yahweh, the Everlasting God.
34
ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
34
Abraham lived as a foreigner in the land of the Philistines many days.
Choose Theme